Joshua 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯುದ್ಧಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜೆರಿಕೊವಿನ ಬಯಲಿನ ಕಡೆಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:
Kannada BSI Bible 2016
ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸುಮಾರು ನಾಲ್ವತ್ತು ಸಾವಿರ ಭಟರಾಗಿದ್ದು ಯುದ್ಧಮಾಡುವದಕ್ಕಾಗಿ ಯೆಹೋವನ ಮುಂದೆ ಯೆರಿಕೋವಿನ ಬೈಲಿಗೆ ಬಂದರು.
Kannada Bible (KNCL) BSI 2016
ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.