Joshua 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.
Kannada BSI Bible 2016
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.
Kannada Bible (KNCL) BSI 2016
ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.