Joshua 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
Kannada BSI Bible 2016
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.
Kannada Bible (KNCL) BSI 2016
ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.