Joshua 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ’ ಎಂದು ನೀವು ಮಕ್ಕಳಿಗೆ ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.
Kannada BSI Bible 2016
ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿ ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಮುಂದೆ ಈ ಯೊರ್ದನನ್ನು ಬತ್ತಿಸಿ ನಿಮ್ಮನ್ನು ದಾಟಿಸಿದ್ದಾನೆ.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.