Joshua 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.
Kannada BSI Bible 2016
ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿರುವ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ನಿಲ್ಲಿಸಿರಿ ಎಂದು ಆಜ್ಞಾಪಿಸಬೇಕೆಂದು ಹೇಳಿದನು.
Kannada Bible (KNCL) BSI 2016
ಅವರಿಗೆ, ‘ನೀವು ಜೋರ್ಡನಿನ ಮಧ್ಯದಲ್ಲಿ ಯಾಜಕರು ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ, ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿ’ ಎಂದು ಆಜ್ಞಾಪಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು.