Joshua 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
Kannada BSI Bible 2016
ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
Kannada Bible (KNCL) BSI 2016
“ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.