Joshua 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
Kannada BSI Bible 2016
ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.
Kannada Bible (KNCL) BSI 2016
‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.