Joshua 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯೆಹೋಶುವನ ಆಜ್ಞೆಯಂತೆ ಜೋರ್ಡನ್ ನದಿಯ ಮಧ್ಯಭಾಗದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಬಂದರು. ಇಸ್ರೇಲಿನ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲುಗಳಿದ್ದವು. ಯೆಹೋವನು ಯೆಹೋಶುವನಿಗೆ ಹೇಳಿದಂತೆಯೇ ಅವರು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಬಂದು ತಾವು ಇಳಿದುಕೊಂಡಿದ್ದ ಸ್ಥಳದಲ್ಲಿ ಆ ಕಲ್ಲುಗಳನ್ನು ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
Kannada BSI Bible 2016
ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
Kannada Bible (KNCL) BSI 2016
ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು.