Joshua 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.
Kannada BSI Bible 2016
ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿವಸದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸ ತೊಡಗಿದರು. ಹೇಗಂದರೆ ಅದೇ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು.
Kannada Bible (KNCL) BSI 2016
ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.