Joshua 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.
Kannada BSI Bible 2016
ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು.
Kannada Bible (KNCL) BSI 2016
ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು.