Joshua 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 4
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
Kannada BSI Bible 2016
ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್‌ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.
Kannada Bible (KNCL) BSI 2016
ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.