Joshua 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.
Kannada BSI Bible 2016
ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗದವರಿಗೆಲ್ಲಾ ಸುನ್ನತಿಯಾದ ಮೇಲೆ ಅವರು ವಾಸಿಯಾಗುವವರೆಗೆ ತಮ್ಮ ತಮ್ಮ ಸ್ಥಳಗಳಲ್ಲಿ ಪಾಳೆಯದಲ್ಲಿಯೇ ಇದ್ದರು.
Kannada Bible (KNCL) BSI 2016
ಸುನ್ನತಿಯಾದ ಮೇಲೆ ವಾಸಿಯಾಗುವವರೆಗೆ ಜನರೆಲ್ಲರು ಪಾಳೆಯದ ತಮ್ಮ ತಮ್ಮ ಸ್ಥಳಗಳಲ್ಲೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲರೂ ಸುನ್ನತಿ ಮಾಡಿಸಿಕೊಂಡ ತರುವಾಯ ಅವರು ವಾಸಿಯಾಗುವವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.