Joshua 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.
Kannada BSI Bible 2016
ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೋಶುವನಿಗೆ - ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲೆಂಬ ಹೆಸರಿರುತ್ತದೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.