Joshua 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.
Kannada BSI Bible 2016
ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.)
Kannada Bible (KNCL) BSI 2016
ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.