Joshua 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ಆ ರಾತ್ರಿ ಅಲ್ಲಿಯೇ ಉಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು.
Kannada BSI Bible 2016
ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಸುತ್ತಿಸಿದ ಮೇಲೆ ಅವರು ತಿರಿಗಿ ಪಾಳೆಯಕ್ಕೆ ಬಂದು ರಾತ್ರಿಕಳೆದರು.
Kannada Bible (KNCL) BSI 2016
ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.