Joshua 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.
Kannada BSI Bible 2016
ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿವಸ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿವಸದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.
Kannada Bible (KNCL) BSI 2016
ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.