Joshua 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.
Kannada BSI Bible 2016
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.
Kannada Bible (KNCL) BSI 2016
ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.