Joshua 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.
Kannada BSI Bible 2016
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.
Kannada Bible (KNCL) BSI 2016
ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.