Joshua 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು
Kannada BSI Bible 2016
ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು
Kannada Bible (KNCL) BSI 2016
ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.