Joshua 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.
Kannada BSI Bible 2016
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;
Kannada Bible (KNCL) BSI 2016
ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.