Joshua 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.
Kannada BSI Bible 2016
ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.
Kannada Bible (KNCL) BSI 2016
ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.