Joshua 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
Kannada BSI Bible 2016
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.
Kannada Bible (KNCL) BSI 2016
ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.