Joshua 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.
Kannada BSI Bible 2016
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು.
Kannada Bible (KNCL) BSI 2016
ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.