Joshua 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
Kannada BSI Bible 2016
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.