Joshua 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಸೂಚಿಸುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿ ನನ್ನ ಬಳಿಗೆ ಬರಬೇಕು. ಯಾವ ಕುಟುಂಬನ್ನು ಸೂಚಿಸುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿ ನನ್ನ ಬಳಿಗೆ ಬರಬೇಕು.
Kannada BSI Bible 2016
ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಳೆ ಬೆಳಿಗ್ಗೆ ನೀವು ಕುಲಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಹಿಡಿಯುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿಯೂ, ಯಾವ ಗೋತ್ರವನ್ನು ಹಿಡಿಯುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿಯೂ, ಯಾವ ಕುಟುಂಬವನ್ನು ಹಿಡಿಯುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿಯೂ ಬರಬೇಕು.
Kannada Bible (KNCL) BSI 2016
ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿ. ಸರ್ವೇಶ್ವರ ಯಾವ ಕುಲವನ್ನು ಸೂಚಿಸುತ್ತಾರೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾರೋ ಆ ಗೋತ್ರವು ಕುಟುಂಬ ಕುಟುಂಬವಾಗಿ, ಯಾವ ಕುಟುಂಬವನ್ನು ಸೂಚಿಸುತ್ತಾರೋ ಆ ಕುಟುಂಬದವರು ಒಬ್ಬೊಬ್ಬರಾಗಿ ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.