Joshua 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ”‘ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.
Kannada BSI Bible 2016
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.
Kannada Bible (KNCL) BSI 2016
ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”