Joshua 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.
Kannada BSI Bible 2016
ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.
Kannada Bible (KNCL) BSI 2016
ಆ ಕುಟುಂಬದವರಲ್ಲಿ ಒಬ್ಬನಾದ ಮೇಲೆ ಒಬ್ಬನನ್ನು ಕರೆದಾಗ ಆಕಾನನು ಸಿಕ್ಕಿಕೊಂಡನು. ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಹಾಗೂ ಕರ್ಮೀಯ ಮಗನೂ ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.