Joshua 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿದಿಟ್ಟಿದ್ದ ಆ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.
Kannada BSI Bible 2016
ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ನೋಡಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹುಗಿದಿತ್ತು. ಬೆಳ್ಳಿಯು ಅದರ ಕೆಳಗಿತ್ತು.
Kannada Bible (KNCL) BSI 2016
ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಿದರು. ಆ ನಿಲುವಂಗಿಯನ್ನು ಗುಡಾರದಲ್ಲಿ ಹೂತಿಡಲಾಗಿತ್ತು. ಅದರ ಕೆಳಗೆ ಬೆಳ್ಳಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.