Joshua 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
Kannada BSI Bible 2016
ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವುಗಳನ್ನು ಗುಡಾರದೊಳಗಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
Kannada Bible (KNCL) BSI 2016
ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.