Joshua 8:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
Kannada BSI Bible 2016
ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.