Joshua 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಜೊತೆಗಿದ್ದ ಎಲ್ಲ ಸೈನಿಕರು “ಆಯಿ”ಯ ಕಡೆಗೆ ಹೋದರು. ಅವರು ನಗರದ ಮುಂದುಗಡೆ ನಿಂತರು. ಸೈನ್ಯವು ನಗರದ ಉತ್ತರ ದಿಕ್ಕಿನಲ್ಲಿಳಿದುಕೊಂಡಿತು. ಈ ಸೈನ್ಯ ಮತ್ತು “ಆಯಿ” ಪಟ್ಟಣದ ನಡುವೆ ಒಂದು ಕಣಿವೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
Kannada BSI Bible 2016
ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
Kannada Bible (KNCL) BSI 2016
ಅವನೊಂದಿಗಿದ್ದ ಯೋಧರೆಲ್ಲರು ನಗರದ ಸಮೀಪಕ್ಕೆ ಏರಿಬಂದು ಅದರ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ಕಣಿವೆ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸಂಗಡ ಇದ್ದ ಸೈನಿಕರೆಲ್ಲಾ ನಡೆದು ಪಟ್ಟಣದ ಸಮೀಪವಾಗಿ ಬಂದು ಸೇರಿ, ಆಯಿ ಎಂಬ ಪಟ್ಟಣದ ಉತ್ತರ ದಿಕ್ಕಿನಲ್ಲಿ ಪಾಳೆಯಲ್ಲಿ ಇಳಿದುಕೊಂಡರು. ಆದರೆ ಆಯಿ ಎಂಬ ಪಟ್ಟಣಕ್ಕೂ ಅವರಿಗೂ ಮಧ್ಯದಲ್ಲಿ ಒಂದು ಕಣಿವೆ ಇತ್ತು.