Joshua 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
Kannada BSI Bible 2016
ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವದಕ್ಕೋಸ್ಕರ ಇರಿಸಿದನು.
Kannada Bible (KNCL) BSI 2016
ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.