Joshua 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.
Kannada BSI Bible 2016
ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿಗೆ ಹೋದನು.
Kannada Bible (KNCL) BSI 2016
ನಗರದ ಉತ್ತರದಲ್ಲಿದ್ದ ಸಮಸ್ತ ಸೈನ್ಯವನ್ನು, ನಗರದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನು ಕ್ರಮಪಡಿಸಿದ ನಂತರ ಅವನು ಆ ರಾತ್ರಿಯನ್ನು ಕಣಿವೆಯಲ್ಲಿ ಕಳೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು.