Joshua 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
Kannada BSI Bible 2016
ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು.
Kannada Bible (KNCL) BSI 2016
ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.