Joshua 8:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.
Kannada BSI Bible 2016
ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೋಶುವನಿಗೆ - ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ ಎನ್ನಲು ಅವನು ಅದನ್ನು ಚಾಚಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.