Joshua 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
Kannada BSI Bible 2016
ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.
Kannada Bible (KNCL) BSI 2016
ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.