Joshua 8:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ ‘ಆಯಿ’ ಜನರೊಂದಿಗೆ ಹೋರಾಡಲು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.
Kannada BSI Bible 2016
ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಆಯಿ ಎಂಬ ಊರಿನ ಜನರನ್ನು ಹೊಡೆದರು.
Kannada Bible (KNCL) BSI 2016
ನಗರವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ನೋಡಿದ ಯೆಹೋಶುವ ಹಾಗೂ ಇಸ್ರಯೇಲರು ಹಿಂದಿರುಗಿ ಆಯಿ ಜನರ ಮೇಲೆ ಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು.