Joshua 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು ‘ಆಯಿ’ಯ ಜನರ ಎರಡು ಕಡೆಗೂ ಇತ್ತು. ‘ಆಯಿ’ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
Kannada BSI Bible 2016
ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದೊಳಗೆ ನುಗ್ಗಿದವರೂ ಬಂದುಬಿಟ್ಟದ್ದರಿಂದ ಆಯಿ ಎಂಬ ಊರಿನವರು ಈಚೆಯಲ್ಲಿಯೂ ಆಚೆಯಲ್ಲಿಯೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಹೊಡೆದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
Kannada Bible (KNCL) BSI 2016
ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು.