Joshua 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯುದ್ಧದಲ್ಲಿ ಇಸ್ರೇಲರು ‘ಆಯಿ’ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು ‘ಆಯಿ’ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
Kannada BSI Bible 2016
ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿ ಮುಗಿಸಿಬಿಟ್ಟನಂತರ ಎಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಹತಿಸಿದರು.
Kannada Bible (KNCL) BSI 2016
ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.