Joshua 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
Kannada BSI Bible 2016
ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಪಟ್ಟಣದೊಳಗಿಂದ ಪಶು ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
Kannada Bible (KNCL) BSI 2016
ಸರ್ವೇಶ್ವರ ಯೆಹೋಶುವನಿಗೆ ಆಜ್ಞಾಪಿಸಿದಂತೆಇಸ್ರಯೇಲರು ಆ ನಗರದಿಂದ ಪಶುಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು.