Joshua 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೆಹೋಶುವನು ‘ಆಯಿ’ ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.
Kannada BSI Bible 2016
ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.
Kannada Bible (KNCL) BSI 2016
ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.