Joshua 8:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
Kannada BSI Bible 2016
ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದಂತೆಯೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೂ ಯೆಹೋಶುವನು ಆ ಸಮಯದಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಉಳಿ ಮುಂತಾದವುಗಳನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Kannada Bible (KNCL) BSI 2016
ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.