Joshua 8:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
Kannada BSI Bible 2016
ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಶಾಪ ವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
Kannada Bible (KNCL) BSI 2016
ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಹಾಗು ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು.