Joshua 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಸಂಗಡವಿರುವ ಜನರನ್ನು ಕರೆದುಕೊಂಡು ಪಟ್ಟಣದ ಕಡೆಗೆ ಹೋಗುತ್ತೇನೆ. ಪಟ್ಟಣದೊಳಗಿರುವ ಜನರು ನಮ್ಮ ಸಂಗಡ ಕಾದಾಡಲು ಹೊರಗೆ ಬರುತ್ತಾರೆ. ನಾವು ಮುಂಚಿನಂತೆ ಹಿಂತಿರುಗಿ ಅಲ್ಲಿಂದ ಓಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
Kannada BSI Bible 2016
ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣಕ್ಕೆ ಬಹು ದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರ್ರಿ. ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು.
Kannada Bible (KNCL) BSI 2016
ನಾನು ಮತ್ತು ನನ್ನ ಸಂಗಡದವರೆಲ್ಲರು ನಗರದ ಸಮೀಪಕ್ಕೆ ಹೋಗುತ್ತೇವೆ. ಆಯಿಯ ಜನರು ಮುಂಚಿನಂತೆ ನಮ್ಮೊಡನ ಯುದ್ಧಕ್ಕೆ ಬರುವರು. ಕೂಡಲೆ ನಾವು ಅಲ್ಲಿಂದ ಓಡಿಹೋಗುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನೂ, ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಸೇರುವೆವು. ಆಗ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.