Joshua 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.
Kannada BSI Bible 2016
ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -
Kannada Bible (KNCL) BSI 2016
ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.