Joshua 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
Kannada BSI Bible 2016
ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸವಾಗಿದ್ದವು; ಈಗ ಹರಿದವೆ. ನಮ್ಮ ಬಟ್ಟೆ ಕೆರಗಳು ದೀರ್ಘಪ್ರಯಾಣದಿಂದ ಹಳೆಯವಾದವು ಅಂದರು.
Kannada Bible (KNCL) BSI 2016
ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು.