Joshua 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
Kannada BSI Bible 2016
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.
Kannada Bible (KNCL) BSI 2016
ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.