Joshua 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.
Kannada BSI Bible 2016
ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
Kannada Bible (KNCL) BSI 2016
ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.