Joshua 9:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಜನನಾಯಕರು, “ನಾವು ಮಾತುಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
Kannada BSI Bible 2016
ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರಧಾನರೆಲ್ಲರೂ ಸರ್ವ ಸಮೂಹದವರಿಗೆ - ನಾವು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಅವರನ್ನು ಮುಟ್ಟುವದಕ್ಕಾಗದು.
Kannada Bible (KNCL) BSI 2016
ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು.