Joshua 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
Kannada BSI Bible 2016
ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿ ಬದುಕಲಿ ಎಂದು ಹೇಳಿದರು. ಪ್ರಧಾನರ ಮಾತಿನಂತೆಯೇ ಆಯಿತು.
Kannada Bible (KNCL) BSI 2016
ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು.